Maneyinda Santosha ಮನೆಯಿಂದ ಸಂತೋಷ ಕೆಲವರಿಗೆ ಲೋಕದಲಿ
- Jun 2, 2023
- 1 min read
Updated: Jan 11
ಮನೆಯಿಂದ ಸಂತೋಷ ಕೆಲವರಿಗೆ ಲೋಕದಲಿ
ಧನದಿಂದ ಸಂತೋಷ ಕೆಲವರಿಗೆ ಲೋಕದಲಿ
ವನಿತೆಯಿಂದ ಸಂತೋಷ ಕೆಲವರಿಗೆ ಲೋಕದಲಿ
ತನಯನಿಂದ ಸಂತೋಷ ಕೆಲವರಿಗೆ ಲೋಕದಲಿ
ಇನಿತು ಸಂತೋಷ ಅವರವರಿಗಾಗಲಿ
ನಿನ್ನ ನೆನೆವೋ ಸಂತೋಷ ಎನಗಾಗಲಿ ನಮ್ಮ ರಂಗವಿಠ್ಠಲ ॥
Comments